Current AffairsSpardha Times

ಯುವನಿಧಿ ಯೋಜನೆಗೆ ಯಾರು ಅರ್ಹರು..? ನೋಂದಣಿ ಹೇಗೆ..?

Share With Friends

ಕರ್ನಾಟಕದ ಆಡಳಿರೂಢ ಕಾಂಗ್ರೆಸ್ ಸರ್ಕಾರದ ಚುನಾವಣಾ ಪ್ರಣಾಳಿಕೆಯ 5ನೇ ‘ಗ್ಯಾರಂಟಿ’ ಭರವಸೆ ‘ಯುವನಿಧಿ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕದಲ್ಲಿ ಪದವಿ ಹಾಗೂ ಡಿಪ್ಲೊಮಾ ಓದಿ ಉದ್ಯೋಗ ಇಲ್ಲದ 5,29,000 ಯುವಕ- ಯುವತಿಯರು ಇದ್ದಾರೆ. ಈ ಪೈಕಿ 4,21,000 ಸಾವಿರ ಪದವೀಧರರು ಹಾಗೂ 48,000 ಡಿಪ್ಲೊಮಾ ಪದವೀಧರರು ಇದ್ದಾರೆಂದು ಎನ್ನಲಾಗಿದೆ. 5 ಲಕ್ಷ 20 ಸಾವಿರ ಯುವಕ-ಯುವತಿಯರು ಎರಡು ವರ್ಷಗಳ ಕಾಲ ಇದರ ಲಾಭ ಪಡೆಯಲಿದ್ದಾರೆ. ಹಣದ ಜೊತೆ ರಿಜಿಸ್ಟರ್ ಮಾಡಿಕೊಂಡವರಿಗೆ ಕೌಶಲ್ಯ ತರಬೇತಿ ನೀಡಲಾಗುತ್ತದೆ.

ಯಾರು ಅರ್ಹರು..?
✦ 2022-23ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ತೇರ್ಗಡೆ ಆಗಿ 6 ತಿಂಗಳಿಂದ ಉದ್ಯೋಗ ಸಿಗದೇ ಇರುವವರಿಗೆ ಯುವನಿಧಿ ಯೋಜನೆಯ ಲಾಭ ಸಿಗಲಿದೆ.
✦ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು 6 ತಿಂಗಳು ಪೂರೈಸಿರಬೇಕು.
✦ ಉನ್ನತ ಶಿಕ್ಷಣ ವ್ಯಾಸಾಂಗ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಬಹುದು. ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೋಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ.
✦ ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ.
✦ ಡಿಪ್ಲೋಮಾ ಹೊಂದಿರುವವರಿಗೆ 1,500 ರೂ. ಆರ್ಥಿಕ ನೆರವು. 2 ವರ್ಷದವರೆಗೆ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ.

ಮೊದಲ ಮಹಾಯುದ್ಧ (World War I) : ನೆನಪಿನಲ್ಲಿಡಬೇಕಾದ ಅಂಶಗಳು

ನೋಂದಣಿ ಹೇಗೆ..?
ಯುವಕ-ಯುವತಿಯರ ನೆರವಿಗಾಗಿ ಸರ್ಕಾರ ಬಂದಿದೆ. 2022-23 ರಲ್ಲಿ ಪಾಸ್ ಆಗಿರೋರು ಸೇವಾಸಿಂಧು, ಕರ್ನಾಟಕ ಒನ್, ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಸೇರಿದಂತೆ ಇತರೆ ಸೇವಾ ಕೇಂದ್ರಗಳಲ್ಲಿ ಉಚಿತವಾಗಿ ರಿಜಿಸ್ಟರ್ ಮಾಡಿಕೊಳ್ಳಬಹುದು. ಯುವಕರಿಂದ ನಾವು ಯಾವುದೇ ಕೆಲಸ ಇಲ್ಲ ಅಂತ ಸೆಲ್ಫ್ ಡಿಕ್ಲರೇಷನ್‌ ಮಾಡಿಕೊಳ್ಳಬೇಕಾಗಿರುತ್ತದೆ. ನೋಂದಣಿ ಮಾಡಿಕೊಳ್ಳಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಭರಿಸಬೇಕಾದ ಅಗತ್ಯ ಇಲ್ಲ.

ಎಷ್ಟು ವರ್ಷ ಲಾಭ ಪಡೆಯಬಹುದು..?
ಯೋಜನೆ ಮೂಲಕ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ. ನಿಗದಿ ಮಾಡಿದ್ದರೆ, ಡಿಪ್ಲೊಮ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ಸಿಗಲಿದೆ. ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ನಿರುದ್ಯೋಗಿ ಯುವಕರಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?
✦ ಯುವನಿಧಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ ಕರ್ನಾಟಕದವರಾಗಿರಬೇಕು.
✦ ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ ಇರಬೇಕು.
✦ ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ, ಆಧಾರ್‌ ಕಾರ್ಡ್‌, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಖಾತೆ ವಿವರ, ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿಯನ್ನು ಸಲ್ಲಿಸಬೇಕು.
✦ 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಫಲಾನುಭವಿಗೆ ಉದ್ಯೋಗ ಸಿಕ್ಕರೆ ತಕ್ಷಣವೇ ನಿರುದ್ಯೋಗ ಭತ್ಯೆಯನ್ನು ಸ್ಥಗಿತಗೊಳಿಸಲಾಗುತ್ತದೆ. ಇಂತಹವರು ಯುವನಿಧಿ ಯೋಜನೆಗೆ ಅರ್ಹರಾಗಿರುವುದಿಲ್ಲ…

✦ 2018 ರ ಮೊದಲು ನೀಡಲಾದ ಸಿಇಟಿ ನೋಂದಣಿ ಸಂಖ್ಯೆ ಅಥವಾ ಫಲಾನುಭವಿ ಹೆಸರು ಇರುವ ಕುಟುಂಬದ ಪಡಿತರ ಚೀಟಿಯನ್ನು ವಾಸಸ್ಥಳ ಪರಿಶೀಲನೆ ದಾಖಲೆಯಾಗಿ ಸರ್ಕಾರ ಪರಿಗಣಿಸುತ್ತದೆ. ಅರ್ಜಿದಾರರು ಕೋರ್ಸ್ ಪೂರ್ಣಗೊಂಡ ನಂತರ 180 ದಿನಗಳ ಅವಧಿಯವರೆಗೆ ಕಾಯಬೇಕಾಗಿಲ್ಲ. ಹೀಗಾಗಿ ಯುವನಿಧಿ ಯೋಜನೆಗೆ ಈಗಿನಿಂದಲೇ ಅರ್ಜಿ ಸಲ್ಲಿಸಬಹುದು.

ಯಾರಿಗೆ ಈ ಯೋಜನೆ ಅನ್ವಯಿಸುವುದಿಲ್ಲ :
✦ ಉನ್ನತ ವ್ಯಾಸಂಗಕ್ಕೆ ವಿದ್ಯಾಭ್ಯಾಸ ಮುಂದುವರೆಸುವವರಿಗೆ,
✦ Apprentice ವೇತನವನ್ನು ಪಡೆಯುತ್ತಿರುವವರು
✦ ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗದಲ್ಲಿರುವವರಿಗೆ ಯೋಜನೆ ಅನ್ವಯವಾಗುವುದಿಲ್ಲ.
✦ ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರಿಗೆ ಯೋಜನೆಯ ಫಲ ಸಿಗುವುದಿಲ್ಲ.

‘ವೀರ್ ಬಾಲ್ ದಿವಸ್’ ಆಚರಣೆ ವಿಶೇಷತೆ ಏನು..? ಇತಿಹಾಸ ಏನು..?

Leave a Reply

Your email address will not be published. Required fields are marked *

error: Content Copyright protected !!